ಸಾರಿಗೆ ಸಚಿವರ ತವರುನಾಡಿನಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಎ. 09. ಅಧಿಕಾರಿಗಳ ಕಿರುಕುಳ ತಳಲಾರದೇ ಸಾರಿಗೆ ನೌಕರರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲೇ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಶಿವಕುಮಾರ್ ನೀಲಗಾರ (40) ಎಂದು ಗುರುತಿಸಲಾಗಿದೆ. ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇವರು ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕ.ರಾ.ರ.ಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

Also Read  ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

error: Content is protected !!
Scroll to Top