ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ ➤ ಕೆ.ಎಸ್ ಈಶ್ವರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 09. ರಾಜ್ಯ ರಸ್ತೆ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ರವರ ನಾಯಕತ್ವವನ್ನು ಬಿಟ್ಟು, ಸರ್ಕಾರದ ಜೊತೆ ಮಾತುಕತೆ ನಡೆಸಲಿ. ಆಗ ಅವರ ಸಮಸ್ಯೆ ಆಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆಯು ಒಂದು ಪರ್ಸೆಂಟ್ ಕೂಡಾ ನ್ಯಾಯದ ಪರವಾಗಿಲ್ಲ. ಸರ್ಕಾರ ಈ ಬೇಡಿಕೆಯನ್ನು ಒಪ್ಪುವುದಕ್ಕೂ ಸಾಧ್ಯವಿಲ್ಲ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿದಲ್ಲಿ ಎಲ್ಲಾ ಇಲಾಖೆಗಳ ನೌಕರರ ಇದೇ ಮನವಿಯನ್ನು ಮಾಡುತ್ತಾರೆ ಎಂದರು.

Also Read  ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

error: Content is protected !!
Scroll to Top