ಮಂಗಳೂರು: ದುಬೈಯಿಂದ ಅಕ್ರಮವಾಗಿ‌ ಚಿನ್ನ ಸಾಗಾಟ- ಆರೋಪಿ ಅರೆಸ್ಟ್ ➤ 30.73ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 09. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 30.73 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತನನ್ನು ಕೇರಳದ ಕಾಸರಗೋಡಿನ ಆಲಂಪಾಡಿ ನಿವಾಸಿ ಇಬ್ರಾಹಿಂ ಪನಾಲಂ ಅಬ್ದುಲ್ಲ ಎಂದು ಗುರುತಿಸಲಾಗಿದೆ. ಈತ ದುಬೈಯಿಂದ ಬರುವಾಗ ಅಕ್ರಮವಾಗಿ ಆತನ ಒಳಚಡ್ಡಿಯಲ್ಲಿ 647 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ದುಬೈಯಿಂದ ವಿಮಾನದ ಮೂಲಕ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಆರೋಪಿಯನ್ನು ತಪಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಆತನಲ್ಲಿದ್ದ 30.73 ಲಕ್ಷ ರೂ. ಮೌಲ್ಯದ 647 ಗ್ರಾಮ್ ಚಿನ್ನವನ್ನು ವಶಪಡಿಸಿದ್ದಾರೆ ಎನ್ನಲಾಗಿದೆ.

Also Read  ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

error: Content is protected !!
Scroll to Top