ಕಮ್ಯೂನಿಟಿ ಡೆವಲಪ್‌ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ಆಸರೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 12. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯೂನಿಟಿ ಡೆವಲಪ್ ಮೆಂಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು ಎಂಬಲ್ಲಿ ಬಡ ಕುಟುಂಬವೊಂದರ ಮನೆ ದುರಸ್ತಿಗೊಳಿಸಿ, ಶೌಚಾಲಯ ನಿರ್ಮಿಸಿ ಹಸ್ತಾಂತರ ಕಾರ್ಯವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಮುಸ್ತಫಾ ಜಿಕೆ, ಉಜಿರೆ ಡಿವಿಷನ್ ಅಧ್ಯಕ್ಷ ಮುಹಮ್ಮದ್ ಅಲಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷರಾದ ಹೈದರ್ ನಿರ್ಸಾಲ್, ಎಸ್ಡಿಪಿಐ ವಿಧಾನಸಭಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Also Read    ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ

error: Content is protected !!
Scroll to Top