ಕಾಸರಗೋಡು: ಆಂಬ್ಯುಲೆನ್ಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 14. ಆಂಬ್ಯುಲೆನ್ಸ್‌ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್‌ ಸಹಸವಾರ ಬಾಲಕ ಮೃತಪಟ್ಟು, ಸ್ಕೂಟರ್‌ ಸವಾರ ಗಾಯಗೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.


ಮೃತ ಬಾಲಕನನ್ನು ಬದಿಯಡ್ಕ ಪೆರಡಾಲದ ಅಬ್ದುಲ್ ಶಾಹಿಲ್ (16) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮೂಕಂಪಾರೆಯ ಅಬ್ದುಲ್ ಸಮದ್ (19) ಎನ್ನಲಾಗಿದೆ. ಉಕ್ಕಿನಡ್ಕ ವೈದ್ಯಕೀಯ ಕಾಲೇಜಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶಾಹಿಲ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

error: Content is protected !!
Scroll to Top