ಕಾರು ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ➤ ಬಸ್ಸಿನಡಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.14. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರನ ಮೇಲೆ ಬಸ್ಸು ಹರಿದು ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಬುಧವಾರದಂದು ಸಂಭವಿಸಿದೆ.

ಮೃತ ಸವಾರನನ್ನು ಅತ್ತಾವರ ನಿವಾಸಿ ಧೀಮಂತ್(30) ಎಂದು ಗುರುತಿಸಲಾಗಿದೆ. ಇವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಧೀಮಂತ್ ಅವರು ಹಿಂದಿನಿಂದ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಡಬದಲ್ಲಿ ಕೋವಿಡ್ ಸ್ಫೋಟ ➤ ಒಂದೇ ದಿನ 11 ಮಂದಿಗೆ ಕೊರೋನಾ ಪಾಸಿಟಿವ್

 

 

 

error: Content is protected !!
Scroll to Top