ರಾಜ್ಯದಲ್ಲಿ ಕೊರೋನಾ ಸ್ಫೋಟ..‼️ ➤ 24 ಗಂಟೆಗಳಲ್ಲಿ 11,265 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.14. ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,265 ಜನರಲ್ಲಿ ಮಹಾಮಾರಿ ಕೋವಿಡ್ ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಇಲಾಖೆಯ ವರದಿಯಂತೆ ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ 11,265 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10,94,912 ಕ್ಕೆ ಏರಿಕೆಯಾಗಿದೆ. 4364 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 38 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರವೊಂದರಲ್ಲೇ ಇಂದು 8155 ಜನರಿಗೆ ಕೋವಿಡ್ ಸೋಂಕು ತಗುಲಿದೆ.

Also Read  ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

 

 

 

error: Content is protected !!
Scroll to Top