ಮಂಗಳೂರು: ಐಟಿ ಕಛೇರಿಯಲ್ಲಿ ಬೆಂಕಿ ಅವಘಡ ➤ ಅಮೂಲ್ಯ ದಾಖಲೆ ಪತ್ರಗಳು ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 16. ನಗರದ ಅತ್ತಾವರದಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಐಟಿ ಕಟ್ಟಡದ ಮೂರನೇ ಮಹಡಿಯಲ್ಲಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಕಛೇರಿಯ ಅಮೂಲ್ಯ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಐಟಿ ಕಚೇರಿಯ ದಾಖಲೆಪತ್ರಗಳು, ಮೇಜು, ಕುರ್ಚಿ ಹಾಗೂ ಫ್ಯಾನ್ ಗಳು ಬೆಂಕಿಗಾಹುತಿಯಾಗಿವೆ.

Also Read  ಕಾರ್ಕಳ: ಓಮ್ನಿ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

error: Content is protected !!
Scroll to Top