ಬಂಟ್ವಾಳ: ಖಾಲಿ ಸಿಲಿಂಡರ್ ಗೆ ಅಡುಗೆ ಅನಿಲ ತುಂಬಿಸಿ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 16. ಗ್ಯಾಸ್ ಏಜೆನ್ಸಿಯ ಡೆಲಿವರಿ ಸಿಬಂದಿಯೋರ್ವ ಡೆಲಿವೆರಿ ಮಾಡಬೇಕಾಗಿದ್ದ ಗ್ಯಾಸ್ ಸಿಲಿಂಡರ್ ನಿಂದ ಅನಿಲವನ್ನು ಖಾಲಿ ಸಿಲಿಂಡರಿಗೆ ತುಂಬಿಸಿ ಮಾರಾಟ ಮಾಡುತ್ತಿದ್ದುದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾವಳಪಡೂರು ಗ್ರಾಮದ ಅಲಂಪುರಿ ಎಂಬಲ್ಲಿ ನಡೆದಿದೆ.







ಬಂಧಿತನನ್ನು ಉತ್ತರ ಭಾರತ ಮೂಲದ ಕಾರ್ಮಿಕ ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಖಾಲಿ ಸಿಲಿಂಡರಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುವ ಕುರಿತು ಅನುಮಾನಗೊಂಡ ಗ್ರಾಮಸ್ಥರು ಕಾದು ಕುಳಿತು ಪತ್ತೆ ಹಚ್ಚಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top