(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 16. ಬೈಕ್ ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮಂದಡ್ಕ ಗ್ರಾಮದ ಸೀಟ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದೀಪ್ ಭಂಡಾರಿ (34) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಸಹ ಸವಾರ ಕೂಡಾ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಸುದೀಪ್ ಭಂಡಾರಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also Read ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ