ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ



(ನ್ಯೂಸ್ ಕಡಬ) newskadaba.com ಸುಳ್ಯ, ಎ. 17. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಶುಕ್ರವಾರದಂದು ರಾತ್ರಿ ಪತ್ತೆಯಾಗಿದೆ.







ಬಸ್ ನಿಲ್ದಾಣದ ಸಿಬ್ಬಂದಿಯೋರ್ವರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹದ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಮೃತರ ಆಧಾರ್ ಕಾರ್ಡ್ ಸಿಕ್ಕಿದೆ. ಮೃತ ವ್ಯಕ್ತಿ ಮಂಗಳೂರಿನ ಅಚ್ಚುತ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






error: Content is protected !!
Scroll to Top