ಗುತ್ತಿಗಾರು ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ಪರೀಕ್ಷೆ ರದ್ದು, ಆತಂಕದಲ್ಲಿ ಇತರ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಸುಳ್ಯ, ಎ.19. ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ಶಾಲೆಗೆ ರಜೆ ಸಾರಲಾಗಿದೆ.

ಸೋಮವಾರದಂದು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಬಗ್ಗೆ ವರದಿಯಾಗಿದೆ. ಮೂವರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Also Read  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಎಸ್ಪಿ

 

 

error: Content is protected !!
Scroll to Top