ಮೀನು ವ್ಯಾಪಾರದಲ್ಲಿ ವಿಪರೀತ ನಷ್ಟ ➤ ವಿಷ ಸೇವಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಎ. 22. ಇಲಿ ಪಾಷಾಣ ಸೇವಿಸಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಮೃತರನ್ನು ಶಶಿಕಲಾ (49) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೀನು ಮಾರಾಟ ಮಾಡಿಕೊಂಡಿದ್ದ ಇವರಿಗೆ ಮೀನು ಮಾರಾಟದಲ್ಲಿ ವಿಪರೀತ ನಷ್ಟಕ್ಕೊಳಗಾಗಿದ್ದರು. ಕೆಲವು ಕಡೆ ಸಾಲ ಪಡೆದುಕೊಂಡಿದ್ದು, ಅದನ್ನು ವಾಪಸ್ಸು ಹಿಂದಿರುಗಿಸಲಾಗದೇ ಇದ್ದುದರಿಂದ ಮನನೊಂದಿದ್ದರು. ಎ.20 ರಂದು ಬೆಳಿಗ್ಗೆ ಅಸ್ವಸ್ಥಗೊಂಡು ಮಲಗಿದಲ್ಲೆ ಒದ್ದಾಡುತ್ತಿದ್ದ ಇವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ‌ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top