ಮಾಣಿ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 23. ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.


ಟಾಟಾ ಏಸ್ ವಾಹನ ಚಾಲಕ ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಲ್ಲದೇ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಟಾಟಾ ಏಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ

error: Content is protected !!
Scroll to Top