ಕೊಣಾಜೆ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಓರ್ವ ಅರೆಸ್ಟ್, 9 ದನಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಎ. 23. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು 9 ದನಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ನಡೆದಿದೆ.

ಬಂಧಿತನನ್ನು ಮಿಜಾರು ತೋಡಾರ್ ನಿವಾಸಿ ಹಂಝ(22) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಇತರ ನಾಲ್ವರು ದಾಳಿಯ ಸಂದರ್ಭ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎಂದು ತಿಳಿದುಬಂದಿದೆ. ಇದರ ಖಚಿತ ಮಾಹಿತಿ ಪಡೆದ ಕೊಣಾಜೆ‌ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮುಲ್ಕಿ: ಐದು ವರ್ಷದ ಮಗುವನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

error: Content is protected !!
Scroll to Top