ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ➤ 13 ಕೊರೋನಾ ರೋಗಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಎ. 23. ಇಲ್ಲಿನ ಪಾಲ್ಘರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಢ ಸಂಭವಿಸಿದ ಪರಿಣಾಮ 13 ಮಂದಿ ಕೊರೋನಾ ರೋಗಿಗಳು ಮೃತಪಟ್ಟ ಘಟನೆ ಸಂಭವಿಸಿದೆ.


ಬೆಳಗ್ಗಿನ ಜಾವ 3 ಗಂಟೆಯ ಬಳಿಕ ವಿರಾರ್‌ನ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದು, ಮುಂಜಾನೆ 5.20ರ ವೇಳೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ತೀವ್ರ ನಿಗಾ ಘಟಕದ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಪಿಟಿಐಗೆ ಮಾಹಿತಿ ನೀಡಿದ್ದಾರೆ.

Also Read  ದೇಶದ ನಾಲ್ಕು ಸಹಕಾರಿ ಬ್ಯಾಂಕ್‌ಗಳಿಗೆ ದಂಡ ವಿಧಿಸಿದ RBI ➤44 ಲಕ್ಷ ರೂಪಾಯಿ ದಂಡ..!

error: Content is protected !!
Scroll to Top