ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹಿನ್ನೆಲೆ ➤ ಎ. 28ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ತೀವ್ರಗತಿಯಲ್ಲಿ ಸಾಗುತ್ತಿರುವ ಕೊರೋನಾ ಹಿನ್ನೆಲೆ ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಭಾನುವಾರದಂದು ಸುತ್ತೋಲೆ ಹೊರಡಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ ಎ. 28ರಿಂದ ಮೇ. 18ರವರೆಗೆ ನಡೆಸಲು ತೀರ್ಮಾನಿಸಿತ್ತು. ಇಲಾಖೆಯು ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಈ ಹಿಂದೆ ಸೂಚಿಸಿತ್ತು. ಆದರೆ ಕೊರೋನಾದ ಏರುಗತಿಯಲ್ಲಿ ಹರಡುತ್ತಿರುವುದರಿಂದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಬೇಕೆಂದು ಪೋಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಇಲಾಖೆಗೆ ಮನವಿ ಮಾಡಿದ್ದರು. ಹೀಗೆ ಸಲ್ಲಿಕೆಯಾದ ಮನವಿಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲು ಇಲಾಖೆಯು ತೀರ್ಮಾನಿಸಿದೆ.

Also Read  ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

error: Content is protected !!
Scroll to Top