ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಎ.30. ಗ್ರಾಮೀಣ ಭಾಗದಲ್ಲಿ ಕೋವಿಡ್ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 101 ಮಂದಿಗೆ ಕೊರೋನಾ ದೃಢಪಟ್ಟಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ 82 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 19 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.

 

 

 

Scroll to Top