ರಾಜ್ಯದಲ್ಲಿ ಮುಂದುವರಿಯುತ್ತಾ ಲಾಕ್‍ಡೌನ್..⁉️ ➤ ಸುಳಿವು ನೀಡಿದ ಆರೋಗ್ಯ ಸಚಿವ ಡಾ| ಸುಧಾಕರ್

(ನ್ಯೂಸ್ ಕಡಬ) newskadaba.com ಬೀದರ್, ಎ.30. ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಅವರು ಶುಕ್ರವಾರದಂದು ಬೀದರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ನಿಯಂತ್ರಿಸುವ ಸಲುವಾಗಿ 14 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕಿದೆ. ಕೊರೋನಾ ಹೀಗೆಯೇ ಮುಂದುವರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಎಚ್ಚರಿಸಿದ್ದಾರೆ.

Also Read  ತುಳು ಭಾಷೆಗೆ ಮಾನ್ಯತೆ ಕೊಡಲು ಸರ್ಕಾರವನ್ನು ಒತ್ತಾಯಿಸುವಂತೆ ಡಾ.ವೀರೆಂದ್ರ ಹೆಗ್ಗಡೆಗೆ ಮನವಿ

 

 

 

error: Content is protected !!
Scroll to Top