ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ತಪ್ಪಿದ ಅನಾಹುತ, ಚಾಲಕ ಪಾರು



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.30. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದ ಘಟನೆ ಶುಕ್ರವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ನಡೆದಿದೆ.







ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆ ಆಗದೆ ಇದ್ದುದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top