ಲಾಕ್‍ಡೌನ್ ಗೆ ಕ್ಯಾರೇ ಅನ್ನದ ಮಂಗಳೂರಿನ ಪ್ರತಿಷ್ಠಿತ ಕಾಲೇಜು ➤ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಹೊರವಲಯದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಕೋವಿಡ್ ನಿಯಮ‌ಗಳನ್ನು ಉಲ್ಲಂಘಿಸಿ ಹಲವು ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಆಡಳಿತ ಮಂಡಳಿಯ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

 

 

 

error: Content is protected !!
Scroll to Top