ಗಡಿಯಾರ: ಲಾರಿ – ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಮಾಣಿ, ಮೇ.03. ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ.





ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸಿಮೆಂಟ್ ಸಾಗಾಟದ ಲಾರಿ ಮತ್ತು ಬುಡೋಳಿಯಿಂದ ಗಡಿಯಾರ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಬುಡೋಳಿ ನಿವಾಸಿ ಶರೀಫ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.






 

error: Content is protected !!
Scroll to Top