ಕಡಬ ತಾಲೂಕಿನಲ್ಲಿ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ ➤ ಪುತ್ತೂರು, ಸುಳ್ಯ ತಾಲೂಕುಗಳಲ್ಲಿ 188 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಗುರುವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 289 ಮಂದಿಗೆ ಕೊರೋನಾ ದೃಢಪಟ್ಟಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 101 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 134 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 54 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.

 

 

Scroll to Top