(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ನಾಳೆಯಿಂದ (ಮೇ.07) ಜಾರಿಗೆ ಬರುವಂತೆ ಹೊಸ ಕಾನೂನನ್ನು ಹೊರತಂದಿದೆ.
ನಾಳೆಯಿಂದ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, 1 0 ಗಂಟೆಯ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕಾಗಿದೆ. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೇ ಹೋಗಬೇಕಾಗಿದ್ದು, ವಾಹನಗಳಲ್ಲಿ ಬೇರೆ ಕಡೆ ಹೋದರೆ ವಾಹನಗಳನ್ನು ಸೀಜ್ ಮಾಡುವಂತೆ ಸೂಚಿಸಲಾಗಿದೆ. ಮೇ.15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದ್ದು, ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗಿದೆ.