ಆಸ್ಪತ್ರೆ, ಮೆಡಿಕಲ್ ಹೊರತುಪಡಿಸಿ ನಾಳೆ ಜಿಲ್ಲಾದ್ಯಂತ ಸಂಪೂರ್ಣ ಬಂದ್ ➤ ಹೊರಬಂದರೆ ಬೀಳುತ್ತೆ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.

ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಕೈಗಾರಿಕೆಗಳು/ಕಂಪನಿಗಳು/ಸಂಸ್ಥೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಕಟ್ಟಡ ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದಲ್ಲಿ ಮಾತ್ರ ಕಾಮಗಾರಿಯನ್ನು ನಡೆಸಬಹುದಾಗಿದ್ದು, ಹೊರಗಿನ ಪ್ರದೇಶಗಳಿಂದ ಕಾರ್ಮಿಕರನ್ನು ಕರೆತರಲು ಅವಕಾಶವಿಲ್ಲ. ರೋಗಿಗಳು ಮತ್ತು ಅವರ ಪರಿಚಾರಕರು/ವೈದ್ಯಕೀಯ ತುರ್ತು ಸಂದರ್ಭದಲ್ಲಿ ದಾಖಲೆಯನ್ನು ಒದಗಿಸಿ ಸಂಚರಿಸಲು ಅನುಮತಿ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

Also Read  ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ

 

 

error: Content is protected !!
Scroll to Top