(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.07. ಕೇಂದ್ರ ಸರಕಾರವು ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಅಕ್ಸಿಜನ್ ನೀಡುವಂತೆ ಹೈಕೋರ್ಟ್ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಅಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರಕಾರವು 1,200 ಟನ್ ಆಕ್ಸಿಜನ್ನನ್ನು ಕರ್ನಾಟಕಕ್ಕೆ ಪೂರೈಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಅದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಬೇಕೆಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಅಲ್ಲಿ ಕೇಂದ್ರಕ್ಕೆ ತೀವ್ರ ಮುಖಭಂಗವಾಗಿದೆ. ಕರ್ನಾಟಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ತಳ್ಳಲು ನಾವು ತಯಾರಿಲ್ಲ ಎಂದು ತಿಳಿಸಿರುವ ಸುಪ್ರೀಂ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.