ಸೋಮವಾರದಿಂದ 14 ದಿನಗಳ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ➤ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ‌ಕೈಗೊಂಡಿರುವ ರಾಜ್ಯ ಸರಕಾರವು ಮೇ 10 ಸೋಮವಾರದಿಂದ 14 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿರುವ ಸಿಎಂ ಯಡಿಯೂರಪ್ಪ, ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಶಾಲೆ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರೈಲು ಮತ್ತು ವಿಮಾನ ಯಾನ ಸೇವೆ ಯಥಾಸ್ಥಿತಿ ಇರಲಿದ್ದು, ಹೊಟೇಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ಕಲ್ಪಿಸಲಾಗಿದೆ. ಟ್ಯಾಕ್ಸಿ, ಆಟೋ, ಕ್ಯಾಬ್ ಗಳಿಗೆ ತುರ್ತು ಸಂದರ್ಭದಲ್ಲಿ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿಯು ಮೇ 24 ರ ವರೆಗೆ ಜಾರಿಯಲ್ಲಿರಲಿದೆ ಎಂದವರು ತಿಳಿಸಿದ್ದಾರೆ.

Also Read  'SSLC' ಪಾಸಾದವರಿಗೆ ಗುಡ್ ನ್ಯೂಸ್   ➤  ಫೆ.28 ರಂದು ಅಂಚೆ ಪ್ರತಿನಿಧಿಗಳ ನೇರ ಸಂದರ್ಶನ

 

 

 

error: Content is protected !!
Scroll to Top