ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ಆರೋಪ ➤ ಅರಣ್ಯಾಧಿಕಾರಿಗಳ ವಿರುದ್ಧ ಕೋವಿಡ್ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.08. ಅರಣ್ಯಾಧಿಕಾರಿಗಳ ವಾಹನವನ್ನು ಹಿಂಬಾಲಿಸಲಾಗಿದೆ ಎನ್ನುವ ಕಾರಣಕ್ಕೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯ ಕೊಪ್ಪಡ್ಕ ಎಂಬುವರು ಮೇ.04 ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಕೋವಿಡ್ ಸೋಂಕಿತರ ಮನೆಗೆ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರಕಾರಿ ವಾಹನದಲ್ಲಿ ಆಗಮಿಸಿದ ಸುಬ್ರಹ್ಮಣ್ಯ ವಲಯದ ಫಾರೆಸ್ಟರ್ ಅಪೂರ್ವ ಮತ್ತು ಪ್ರಕಾಶ್ ಅಗಸಿಮನಿ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಉದಯ ಕೊಪ್ಪಡ್ಕರವರು ಅರಣ್ಯಾಧಿಕಾರಿಗಳ ವಿರುದ್ಧ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು

Also Read  ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಈ ಬಗ್ಗೆ ಕಲಂ:504,506,323 IPC, ಕಲಂ:5(3),5(4)The Karnataka Epidemic Diseases Act-2020 ನಂತೆ ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

error: Content is protected !!
Scroll to Top