ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ನಿರಂತರ ಅತ್ಯಾಚಾರ ➤ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.08. ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಠಾಣಾ ವ್ಯಾಪ್ತಿಯ ಏನೆಕಲ್ಲು ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ರ ಹರೆಯದ ಯುವತಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ಬಲಾತ್ಕಾರದಿಂದ ನಿರಂತರ ಅತ್ಯಾಚಾರ ಎಸಗಿದ್ದು, ಯುವತಿಯ ಹೊಟ್ಟೆಯನ್ನು ನೋಡಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಈ ಬಗ್ಗೆ ಆರೋಪಿ ಅರುಣ್ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ

 

 

 

error: Content is protected !!
Scroll to Top