ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.10. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೋರ್ವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.







ಮೃತ ಮಹಿಳೆಯನ್ನು ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ ಎಂದು ಗುರುತಿಸಲಾಗಿದೆ. ಹೆರಿಗೆಗೆಂದು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪೂಜಿತಾರವರು ಭಾನುವಾರದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಉಂಟಾದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ತೀವ್ರ ರಕ್ತಸ್ರಾವ ಉಂಟಾಗಿ ಅವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಅವಳಿ ಮಕ್ಕಳು ಆರೋಗ್ಯವಾಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿದ್ದಾರೆ.






 

 

 

error: Content is protected !!
Scroll to Top