ಕಡಬ: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸಕಲೇಶಪುರ ನಿವಾಸಿ ಶೇಖರ್ ಯಾನೆ ಶೇಷಪ್ಪ ಕಂಡಿಗ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ತನ್ನ ಸಂಬಂಧಿ ಬಾಲಕಿಯನ್ನು ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Also Read  ಮತ್ತೆ ಮುಂದೂಡಲ್ಪಟ್ಟ ನೂತನ ಕಡಬ ತಾಲೂಕು ಉದ್ಘಾಟನೆ ► ಕಾರಣವೇನು ಗೊತ್ತೇ...?

ಇದೀಗ ಆರೋಪಿಯನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಎಎಸ್ಐ ಸುರೇಶ್ ಹಾಗೂ ಶಿವರಾಜ್ ನಾಯಕ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

 

 

 

error: Content is protected !!
Scroll to Top