ಕೊರೋನಾ ಸೋಂಕಿಗೆ ಕಡಬ ಮೂಲದ 36 ವರ್ಷದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.12. ಕೊರೋನಾ ಸೋಂಕಿಗೆ ತುತ್ತಾಗಿ ಕಡಬ ಮೂಲದ 36 ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.

ಮೂಲತಃ ಕಡಬ ನಿವಾಸಿಯಾಗಿದ್ದು, ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿರುವ ಪೊಲೀಸ್ ಅಧಿಕಾರಿಯೋರ್ವರ 36 ವರ್ಷದ ಪುತ್ರನಿಗೆ ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿತ್ತು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರದಂದು ಮೃತಪಟ್ಟಿದ್ದಾರೆ‌.

 

 

Scroll to Top