ಕೊರೋನಾ ಸೋಂಕಿಗೆ ಕಡಬ ತಾಲೂಕಿನ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಮತ್ತೋರ್ವರು ಮೃತಪಟ್ಟಿದ್ದು, ಈ ಮೂಲಕ ಐದನೇ ಜೀವ ಬಲಿಯಾದಂತಾಗಿದೆ.







ಕಡಬ ತಾಲೂಕಿನ ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೇನ್ಯ ನಿವಾಸಿ 53 ವರ್ಷದ ವ್ಯಕ್ತಿಯೋರ್ವರು ಇಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಮೃತದೇಹದ ಅಂತ್ಯಸಂಸ್ಕಾರವನ್ನು ಸೇವಾಭಾರತಿಯ ವತಿಯಿಂದ ಪುತ್ತೂರಿನಲ್ಲಿ ನಡೆಸಲಾಯಿತು.






 

 

 

error: Content is protected !!
Scroll to Top