ಸರಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಇಳಿಮುಖ ➤ ಕೆಪಿಸಿಸಿ ವಕ್ತಾರ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 16. ಕೊರೋನಾ ಸೋಂಕಿನ ಲಕ್ಷಣ ಹೊಂದಿದವರನ್ನು ಮಾತ್ರ ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂಬ ಮಾಹಿತಿಯಿದ್ದು, ಸೋಂಕಿತರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿಲ್ಲ. ಕೋವಿಡ್ ಪರೀಕ್ಷೆಗಳನ್ನು ಕಡಿತಗೊಳಿಸುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯನ್ನು ಕುಗ್ಗಿಸುವುದು ಸರ್ಕಾರದ ಉದ್ದೇಶವಾಗಿದೆ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಇದು ಸರ್ಕಾರ ಕಂಡುಕೊಂಡ ಹೊಸ ಮಾರ್ಗವೆಂದು ಕೆ.ಪಿ.ಸಿ.ಸಿ ವಕ್ತಾರ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಪರೀಕ್ಷೆಗಳ ಮೂಲಕ ಸೋಂಕಿತರನ್ನು ಪತ್ತೆ ಹಚ್ಚಬಹುದಾಗಿದ್ದು, ಇದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಟಾಗುವುದರಿಂದ ಸರ್ಕಾರವು ಲಾಕ್ ಡೌನ್ ಮುಂದುವರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಈ ಕಾರಣಕ್ಕಾಗಿ ಸರ್ಕಾರವು ಕೋವಿಡ್ ಪರೀಕ್ಷೆಗೆ ಕಡಿವಾಣ ಹಾಕುವ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಜನರ ಜೀವದ ಮೇಲೆ ಸರ್ಕಾರವು ಚೆಲ್ಲಾಟವಾಡುತ್ತಿದೆ ಎಂಬ ಮಾತನ್ನು ಶೌವಾದ್ ಗೂನಡ್ಕರವರು ಹೇಳಿದ್ದಾರೆ.

Also Read  ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

error: Content is protected !!
Scroll to Top