(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಸ್ಥಾನ ಯಡಿಯೂರಪ್ಪರಿಗೆ ತಪ್ಪಲಿದೆಯಾ..? ಅಭ್ಯರ್ಥಿ ಘೋಷಣೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ…?
ಹೌದು ಹೀಗೊಂದು ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡುವಲ್ಲಿ ಬಿಜೆಪಿಯು ವಿಫಲವಾಗಿದೆ ಎನ್ನಲಾಗುತ್ತಿದ್ದು, ಅದರಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಬದಲಾಯಿಸಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಜ್ಜಾಗುತ್ತಿದೆ ಎನ್ನಲಾಗಿದೆ. ಬಿಜೆಪಿಯ ಫೈರ್ ಬ್ರಾಂಡ್ ಯುವ ಸಂಸದ ಅನಂತ್ ಕುಮಾರ್ ಹೆಗ್ಡೆಯವರನ್ನು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಕ ಮಾಡಲು ರಾಷ್ಟ್ರೀಯ ಮಟ್ಟದಲ್ಲಿ ಮಾತುಕತೆ ಮುಗಿದಿದ್ದು, ಅಧಿಕೃತವಾಗಿ ಘೋಷಣೆ ಮಾಡಲು ಬಾಕಿಯಿದೆ ಎನ್ನುವ ಮಾಹಿತಿಯು ಇದೀಗ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಎಷ್ಟು ಸತ್ಯ ಎಷ್ಟು ಸುಳ್ಳು ಎನ್ನುವುದು ಕೆಲವೇ ದಿನಗಳಲ್ಲಿ ತಿಳಿದುಬರಲಿದೆ.