(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಮೇ. 16. ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಇದೀಗ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿನ ಫಲ್ಗುಣಿ ನದಿಯನ್ನು ಸಂಪರ್ಕಿಸುವ ಹಳ್ಳವೊಂದರಲ್ಲಿ ನೀರು ನಾಯಿಗಳು ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ. ಇದೀಗ ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಬೆಳ್ತಂಗಡಿ: ಹಳ್ಳದಲ್ಲಿ ನೀರುನಾಯಿಗಳ ಹಿಂಡು ಪತ್ತೆ
