ರಾಜ್ಯ ಸರಕಾರದ ವಿಶೇಷ ಪ್ಯಾಕೇಜ್ ಒತ್ತಡದ ಹಾಗೂ ಒಲ್ಲದ ಮನಸ್ಸಿನಿಂದ ಘೋಷಿಸಿರುವ ಪ್ಯಾಕೇಜ್ ➤ ಕೆಪಿಸಿಸಿ ವಕ್ತಾರ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 20. ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಇದು ಕೇವಲ ಘೋಷಣೆಗಷ್ಟೇ ಸೀಮಿತವಾಗದೆ ಸಮರ್ಪಕವಾಗಿ ಜಾರಿಯಾಗಬೇಕು. ಅರ್ಹ ಫಲಾನುಭವಿಗಳಿಗೆ ಇದರ ಉಪಯೋಗ ಸಿಗಬೇಕೆಂದು ಕೆ.ಪಿ.ಸಿ.ಸಿ. ವಕ್ತಾರ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಕಳೆದ ವರ್ಷ ಘೋಷಿಸಿದ ಪ್ಯಾಕೇಜ್ ನಿಂದ ಅರ್ಹರಿಗೆ ಉಪಯೋಗವಾಗಿಲ್ಲ. ಪ್ರತಿಪಕ್ಷಗಳ ಹಾಗೂ ಸಾರ್ವಜನಿಕ ಒತ್ತಡದ ಮೇರೆಗೆ ಸರ್ಕಾರವು ಒಲ್ಲದ ಮನಸ್ಸಿನಿಂದ ಈ ಬಾರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಬಿ.ಪಿ.ಎಲ್.ಕುಟುಂಬಗಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಆರ್ಥಿಕ ಸಹಾಯ ಮಾಡುವುದರಿಂದ ರಾಜ್ಯದ ಕೋಟ್ಯಾಂತರ ಬಡ ಜನರಿಗೆ ಉಪಯೋಗವಾಗಬಹುದು, ಆದರೆ ಸರ್ಕಾರವು ಇದರ ಬಗ್ಗೆ ಗಮನ ಹರಿಸಿಲ್ಲ. ಗ್ರಾಮ ಪಂಚಾಯತ್ ಗಳಿಗೆ ಈಗ ಘೋಷಣೆ ಮಾಡಿರುವುದಕ್ಕಿಂತ ಹೆಚ್ಚಿನ ಅನುದಾನವನ್ನು ಒದಗಿಸಿದ್ದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಈಡಾಗಿರುವವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ. ಸರ್ಕಾರವು ಇದರ ಬಗ್ಗೆ ವಿಶೇಷ ಗಮನ ಹರಿಸಬೇಕೆಂದು ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.

error: Content is protected !!

Join the Group

Join WhatsApp Group