ಬಿಜೆಪಿ ಮುಖಂಡ ಭಾಸ್ಕರ ಗೌಡ ಇಚಿಲಂಪಾಡಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಬಿಜೆಪಿ ಮುಖಂಡ, ಪುತ್ತೂರು ತಾಲೂಕು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿಯವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಹಲವರಲ್ಲಿ ಹಣದ ಬೇಡಿಕೆ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಕಡಬ ತಾಲೂಕು ಇಚ್ಲಂಪಾಡಿ ನಿವಾಸಿ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿರುವ ಭಾಸ್ಕರ ಎಸ್.ಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಲವು ಮಂದಿಗೆ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಅವಶ್ಯಕತೆ ಇರುವುದಾಗಿ ಬೇಡಿಕೆ ಸಲ್ಲಿಸಿದ್ದಾರೆ. ಭಾಸ್ಕರ ಗೌಡರವರ ಹಲವು ಸ್ನೇಹಿತರಿಗೆ ಈ ರೀತಿ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಲಾಗಿದ್ದು ಅವರು ಭಾಸ್ಕರ ಗೌಡರವರಿಗೆ ಫೋನ್ ಮಾಡಿ ವಿಚಾರಣೆ ನಡೆಸಿದ ವೇಳೆ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವುದು ಗಮನಕ್ಕೆ ಬಂದಿದೆ.

Also Read  ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ➤ ಅವಧಿ ವಿಸ್ತರಣೆ

 

 

 

error: Content is protected !!
Scroll to Top