ಕಡಬ ಆರೋಗ್ಯ ಕೆಂದ್ರಕ್ಕೆ ಸಚಿವ ಎಸ್.ಅಂಗಾರ ಹಾಗೂ ಸಂಸದ ಕಟೀಲ್ ಭೇಟಿ ➤ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) Newskadaba.com ಕಡಬ, ಮೇ. 25. ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದರು.

ಬಳಿಕ ಮಾತನಾಡಿದ ಸಚಿವ ಎಸ್.ಅಂಗಾರ, ಈ ತನಕ ಹೋಮ್​ ಐಸೋಲೇಷನ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದರೂ ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳೇ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಮನೆಯವರ ಬಗ್ಗೆಯೇ ಕಾಳಜಿ ತೋರಿಸದೆ ತಿರುಗಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂಥ ವ್ಯಕ್ತಿಗಳನ್ನು ಕೋವಿಡ್ ಸೆಂಟರ್​ಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು. ಅಲ್ಲದೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಈಗಾಗಲೇ ಆಕ್ಸಿಜನ್ ಪ್ಲಾಂಟ್ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದರು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂಜ, ಸುಬ್ರಹ್ಮಣ್ಯ ಹಾಗೂ ನೆಲ್ಯಾಡಿ ವ್ಯಾಪ್ತಿಯಲ್ಲೂ ಕೋವಿಡ್ ಕೇರ್ ಸೆಂಟರ್​ಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ದಾನಿಗಳ ಸಹಕಾರದೊಂದಿಗೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸೇವಾಭಾರತಿ ಮತ್ತು ಸಚಿವರ ವಾರ್ ರೂಂ ಮೂಲಕ ಕೊಡಮಾಡಲಾದ ದಿನಸಿ ಕಿಟ್​ಗಳನ್ನು ಕಡಬ ಸಮುದಾಯ ಆಸ್ಪತ್ರೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ವಿತರಿಸಲಾಯಿತು.

Also Read  ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! - ಬಸ್ ಚಾಲಕ ಅಮಾನತು

error: Content is protected !!