ಅರ್ಧದಲ್ಲಿ ನಿಂತ ಐಪಿಎಲ್ ಪುನರಾರಂಭ ➤ ಬಿಸಿಸಿಐ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) Newskadaba.com ದೆಹಲಿ, ಮೇ. 26. ಕೊರೊನಾ ಎರಡನೇ ಅಲೆಯಿಂದಾಗಿ ಅರ್ಧದಲ್ಲಿ ಸ್ಥಗಿತಗೊಂಡಿರುವ 2021ನೇ ಐಪಿಎಲ್ ಆವೃತ್ತಿಯನ್ನು ಯುಎಇಯಲ್ಲಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ.


ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14ನೇ‌‌ ಆವೃತ್ತಿ ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿರುವ ಈ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅರ್ಧದಲ್ಲೇ ನಿಂತು ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಶೆಯನ್ನು ನೀಗಿಸಲು ಬಿಸಿಸಿಐ ಚಿಂತಿಸುತ್ತಿರುವುದು ದೃಢಪಟ್ಟಿದೆ. ಈ ಸರಣಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 9 ಅಥವಾ 10ರಂದು ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂಬುದು ಕೂಡಾ ಇದೇ ಸಂದರ್ಭದಲ್ಲಿ ಬಹಿರಂಗವಾಗಿದೆ.

Also Read  ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

error: Content is protected !!
Scroll to Top