ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ.ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

 

ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾಗಿತ್ತು. ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Also Read  ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿ.ಸಿ ರೋಡಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ

 

error: Content is protected !!
Scroll to Top