ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ ➤ ಹಲವು ವರ್ಷಗಳಿಂದ ಬೆಳಕು ಕಾಣದ ಶಿವರಾಮ ಕುಟುಂಬಕ್ಕೆ ಕೊನೆಗೂ ಬಂತು ವಿದ್ಯುತ್

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಕಳೆದ ಹಲವು ವರ್ಷಗಳಿಂದ ಒಂದಿಲ್ಲೊಂದು ಅಡೆತಡೆಗಳಿಂದಾಗಿ ಮೂಲಭೂತ ಸೌಕರ್ಯದಿಂದ ವಂಚಿತರಾದ ಕುಟುಂಬವೊಂದು ಪತ್ರಕರ್ತರ ಗ್ರಾಮವಾಸ್ತವ್ಯದ ಫಲಶ್ರುತಿಯಿಂದ ಬೆಳಕು ಕಂಡಿದೆ.

ಕಡಬ ತಾಲೂಕು ಕೊಂಬಾರು ಗ್ರಾಮದ ಶಿವರಾಮ ಅವರು ತನ್ನ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ಮತ್ತು ಹಲವು ಸಮಯದಿಂದ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗದಿರುವ ಕುರಿತು ಕೊಂಬಾರಿನಲ್ಲಿ ಜರಗಿದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಿದ್ದರು. ಈ ಬಗ್ಗೆ ಸ್ಪಂದಿಸಿದ ಜನಪರ ಕಾಳಜಿಯ ಅಧಿಕಾರಿ, ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸಮಸ್ಯೆಯನ್ನು ಬಗೆಹರಿಸಿಕೊಟ್ಟಿದ್ದಾರೆ. ವಿದ್ಯುತ್ ತಂತಿ ಎಳೆಯುವಲ್ಲಿ ಜಾಗದ ತಕರಾರು ಸೇರಿದಂತೆ ಬೇರೆ ಬೇರೆ ಕಾರಣಗಳಿಂದಾಗಿ ಇವರ ಮನೆಗೆ ವಿದ್ಯುತ್ ಸಂಪರ್ಕ ಸಾಧ್ಯವಾಗಿರಲಿಲ್ಲ. ಸಮಸ್ಯೆ ಬಗೆಹರಿಯಲು ವಿದ್ಯುತ್ ಲೈನ್ ಹಾದು ಹೋಗುವ ಜಮೀನಿನ ಮಾಲಕರುಗಳು ಮುಕ್ತ ಮನಸ್ಸಿನಿಂದ ಸಹಕರಿಸಿದ ಕಾರಣದಿಂದಾಗಿ ಸಮಸ್ಯೆ ಬಗೆಹರಿದಿದೆ. ಮೆಸ್ಕಾಂ ವತಿಯಿಂದ 88 ಸಾವಿರ ರೂ. ವೆಚ್ಚದಲ್ಲಿ ಒಟ್ಟು 6 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ.

Also Read  ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

 

 

 

error: Content is protected !!
Scroll to Top