(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.
ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ರೋಗದ ತೀವ್ರತೆ ಅನುಸರಿಸಿ ಅವರಿಗೆ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.