ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ‌. 27. ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಬಿದ್ದ ಘಟನೆ ಪಂಪ್‌ವೆಲ್ ಫ್ಲೈಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಪರಿಣಾಮ ದ್ವಿಚಕ್ರ ಸವಾರನಿಗೆ ಗಂಭೀರ ಗಾಯಗಳಾಗಿವೆ.

ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದಾನೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!
Scroll to Top