ನಾಳೆ (ಮೇ.31) ಕೈಕಂಬ ಶಾಲಾ ಮುಖ್ಯ ಶಿಕ್ಷಕ ತುಕಾರಾಮ ಗೌಡ ಸೇವಾ ನಿವೃತ್ತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕೈಕಂಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತುಕರಾಮ ಗೌಡ ಎಸ್.ರವರು ನಾಳೆ (ಮೇ.31) ಸೇವಾ ನಿವೃತ್ತಿ ಹೊಂದಲಿದ್ದಾರೆ.

1990ರಲ್ಲಿ ಇಡ್ಯಡ್ಕ ಶಾಲೆಯಲ್ಲಿ ಕರ್ತವ್ಯಕ್ಕೆ ಸೇರಿದ ಇವರು ಪುತ್ತೂರು ಹಾಗೂ ಕಡಬ ತಾಲೂಕಿನ ಹಲವು ಶಾಲೆಗಳಲ್ಲಿ ಸಹ ಶಿಕ್ಷಕರಾಗಿ, ಬಂಟ್ರ ಕ್ಲಸ್ಟರ್ ಸಿಆರ್‌ಪಿಯಾಗಿ, ಶಿಕ್ಷಕರ ಸಂಘದ ಪ್ರತಿನಿಧಿಯಾಗಿ ಕಡಬ ತಾಲೂಕು ಶಿಕ್ಷಕರ ಸಂಘದ ಗೌರವಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಬಿಳಿನೆಲೆ ಬೈಲು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ, ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ಬಳಿಕ ಮಂಗಳೂರಿನ ಕೊಡಿಯಾಲ ಬೈಲಿನಲ್ಲಿ ಶಿಕ್ಷಕ ತರಬೇತಿ ಪೂರೈಸಿದ್ದಾರೆ.

Also Read  ಇಂದಿನಿಂದ ಜೂನ್ 20ರ ವರೆಗೆ ಕಡಬ ಪಿಲ್ಯ ಫ್ಯಾಶನ್ ನಲ್ಲಿ ಬಕ್ರೀದ್ ಮೆಗಾ ಸೇಲ್ | ಕೇವಲ 999 ರೂ.ಗೆ ಪುರುಷರ 3 ಜೊತೆ ಶರ್ಟ್

 

 

error: Content is protected !!
Scroll to Top