(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಅದರಂತೆ ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ ಚರ್ಚೆ ನಡೆಸಲಿದ್ದಾರೆ.ತಜ್ಞರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ ಯಡಿಯೂರಪ್ಪ ಲಾಕ್‌ಡೌನ್ ವಿಸ್ತರಣೆಯಾ? ಅಥವಾ ಅನ್ ಲಾಕ್ ಮಾಡಲಾಗುತ್ತದಾ? ಎಂಬುದರ ಕುರಿತು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ.