(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮಾನ್ಸೂನ್ ಜೂನ್ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.