ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ



(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.







 

 

 

ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದು, ತಪಾಸಣೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.






 

error: Content is protected !!
Scroll to Top