ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಅಲ್ಲ. ಪರೀಕ್ಷೆಗೆ ಸರ್ಕಾರ ಆತುರ ಪಡಬಾರದು. ಪರೀಕ್ಷೆ ಮಾಡಲೇಬೇಕು ಅಂದರೆ ಸೋಂಕು ನಿಯಂತ್ರಣಗೊಂಡ ಬಳಿಕ ನಡೆಸಿಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Also Read  ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..!

error: Content is protected !!
Scroll to Top