(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.
ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದು ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಸೂಚನೆಯನ್ನು ನೀಡುತ್ತಿದೆಯಾದರೂ ಮರಣ ಪ್ರಮಾಣ ಮಾತ್ರ ಇಳಿಕೆಯಾಗದಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡುತ್ತಿದೆ.